ಮಂಗಳೂರು: ಕರಾವಳಿ ಭಾಗದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದ 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರಲಿದ್ದು, ಪ್ರವಾಹ ಮತ್ತು ಗುಡ್ಡ ಪ್ರದೇಶದಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ.