02 November 2025 | Join group

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಸೌಜನ್ಯ ಹೋರಾಟಗಾರರಿಗೆ ನೋಟೀಸ್ ನೀಡಿದ SIT

  • 25 Oct 2025 01:23:43 PM

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಎಸ್ ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

 

ಅಕ್ಟೋಬರ್ 27ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ವಿಠಲಗೌಡ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ.

 

ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಎಚ್ಚರಿಕೆ ಕೂಡ ನೀಡಲಾಗಿದೆ. ಇನ್ನೂ ಹಲವು ಅಂಶಗಳನ್ನು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.