02 November 2025 | Join group

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು

  • 26 Oct 2025 01:49:40 PM

ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್.ಎಸ್.ಎಸ್. ಮುಖಂಡ ಕಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದೂರು ನೀಡಲಾಗಿದೆ.

 

ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮಂಜ ಅವರು ದೂರು ನೀಡಿದ್ದು, ಪುತ್ತೂರಿನ ಉಪ್ಪಳಿಗೆಯಲ್ಲಿ ಆಯೋಜಿಸಲಾದ ದೀಪೋತ್ಸವದಲ್ಲಿ ಕಲಡ್ಕ ಪ್ರಭಾಕರ ಭಟ್ ಅವರು ಮಹಿಳೆಯರನ್ನು ಅವಮಾನಿಸುವಂತೆ ಮತ್ತು ಗರ್ಭಿಣಿಯರ ವಿರುದ್ಧ ಹಿಂಸೆಗೆ ಪ್ರೇರೇಪಿಸುವಿಕೆ, ಧರ್ಮಗಳ ನಡುವೆ ದ್ವೇಷ ಮೂಡಿಸುವಂತೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ.