ಮಂಗಳೂರು: ಸ್ಟೀಯರಿಂಗ್ ಗೇರ್ ದೋಷದಿಂದಾಗಿ ನಿಯಂತ್ರಣ ತಪ್ಪಿದ್ದ ದೋಣಿಯಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಗೋವಾ ಮೂಲದ 'ಐಎಫ್‌ಬಿ ಸಂತ್ ಆಂಟನ್-ಐ' ಎಂಬ ದೋಣಿಯು ತಾಂತ್ರಿಕ ದೋಷದಿಂದಾಗಿ ಮಂಗಳೂರಿನ ಕರಾವಳಿಯಿಂದ ಸುಮಾರು 100 ನಾಟಿಕಲ್ ಮೈಲು ದೂರದಲ್ಲಿ 11 ದಿನಗಳಿಂದ ದಿಕ್ಕಿಲ್ಲದೆ ತೇಲಾಡುತ್ತಿತ್ತು.
ದೋಣಿಯು ಸಮುದ್ರದಲ್ಲಿ ನಿಯಂತ್ರಣ ಕಳೆದುಕೊಂಡಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಯ ನಡುವೆಯೂ, ಐಸಿಜಿಎಸ್ ಕಸ್ತೂರ್ಬಾ ಗಾಂಧಿ ನೌಕೆ, ಕೊಚ್ಚಿಯಿಂದ ಕರಾವಳಿ ರಕ್ಷಣಾ ದಳದ ಡೊರ್ನಿಯರ್ ವಿಮಾನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.




