02 November 2025 | Join group

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

  • 01 Nov 2025 11:39:07 AM

70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. 

 

ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.