ಮಂಗಳೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ.
ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಬಸ್ ಓವರ್ಟೇಕ್ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿಯಾಗಿದೆ. ಗಾಯಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.




