ಜೂನ್ 21 ರಂದು ದೇಶ ವಿದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುವುದು. 11ನೇ ಅಂತರಾಷ್ಟ್ರೀಯ ಯೋಗ ದಿವಸ ಇಂದು ಕರ್ನಾಟಕ ರಾಜ್ಯದ ಎಲ್ಲಾ ಕಡೆಗಳಲ್ಲಿ ಆಚರಿಸಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಮತ್ತು ಇನ್ನಿತರ ಗಣ್ಯ ವ್ಯಕ್ತಿಗಳ ಜೊತೆ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ರಾಜ್ಯದ ಗೃಹ ಸಚಿವ ದಿನೇಶ್ ಗುಂಡೂರಾವ್ "ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರವನ್ನು ಆರಂಭಿಸಲಾಗುವುದು: ಎಂದು ತಿಳಿಸಿದ್ದಾರೆ.
ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕ ಆಸ್ಪತ್ರೆಗಳು ಹಾಗೂ ಸಮುದಾಯ ಅರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಸುವ ಉದ್ದೇಶದಿಂದ ಯೋಗ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರಕಾರ ಉದ್ದೇಶಿಸಿದೆ ಎಂದು ಹೇಳಿದರು.
ಪಾಶ್ಚಾತ್ಯ ದೇಶಗಳು ಕೂಡಾ ಯೋಗಕ್ಕೆ ಮರುಳಾಗುತ್ತಿದ್ದು, ಬಹಳಷ್ಟು ಜನ ಯೋಗವನ್ನು ದಿನಚರಿಯಾಗಿ ಮಾಡಿಕೊಂಡಿರುವುದು ಇದರ ವೈಶಿಷ್ಟತೆಯನ್ನು ತೋರಿಸುತ್ತದೆ.