13 August 2026 |

ದೆಹಲಿಯಲ್ಲಿ ನಡೆಯಲಿದೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಕಪ್: ಭಾರಿ ಸಿದ್ಧತೆ

  • 11 Aug 2026 04:34:04 PM

ನವದೆಹಲಿ: 2026ರ BWF ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ನವದೆಹಲಿ ಆತಿಥ್ಯ ವಹಿಸಲಿದೆ. ಪ್ರತಿಷ್ಠಿತ ಟೂರ್ನಿಯು ಆಗಸ್ಟ್ 17ರಿಂದ 23ರವರೆಗೆ ನಡೆಯಲಿದ್ದು, ವಿಶ್ವದ ಹಲವು ಪ್ರಮುಖ ಬ್ಯಾಡ್ಮಿಂಟನ್ ಆಟಗಾರರು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

 

ಭಾರತ ಕೂಡ ತನ್ನ ಪ್ರಮುಖ ಆಟಗಾರರೊಂದಿಗೆ ಟೂರ್ನಿಯಲ್ಲಿ ಭಾಗವಹಿಸಲು ಸಜ್ಜಾಗಿದೆ. ತವರಿನ ನೆಲದಲ್ಲಿ ನಡೆಯುತ್ತಿರುವುದರಿಂದ ಭಾರತೀಯ ಆಟಗಾರರ ಮೇಲೆಯೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

 

ಪಂದ್ಯಾವಳಿಯ ಹಿನ್ನೆಲೆಯಲ್ಲಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸಿದ್ಧತಾ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಪಂದ್ಯಗಳು ಯಾವುದೇ ತೊಂದರೆಯಿಲ್ಲದೆ ನಡೆಯುವಂತೆ ಅಗತ್ಯ ವ್ಯವಸ್ಥೆಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ.

 

ತವರಿನ ಪ್ರೇಕ್ಷಕರ ಬೆಂಬಲದೊಂದಿಗೆ ಭಾರತೀಯ ಆಟಗಾರರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮೂಡಿದೆ.