ಆಸ್ಟ್ರೇಲಿಯಾ: ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದ ಗಿಲ್ ಪಡೆ, ಇದೀಗ ಅಡಿಲೇಡ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು 2 ವಿಕೆಟ್‌ಗಳಿಂದ ಕಳೆದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 264 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 8 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ, ಬ್ಯಾಟಿಂಗ್, ಬೌಲಿಂಗ್ ಹಾಗೂ ಫಿಲ್ಡಿಂಗ್ ಮೂರು ವಿಭಾಗಗಳಲ್ಲೂ ಹೀನಾಯ ಪ್ರದರ್ಶನ ನೀಡಿತು.
ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಸೋತಿದ್ದ ಟೀಂ ಇಂಡಿಯಾ, ಅಡಿಲೇಡ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು 2 ವಿಕೆಟ್‌ಗಳಿಂದ ಕಳೆದುಕೊಂಡಿತು. ಹೀಗಾಗಿ ಸರಣಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತದ ಕೈತಪ್ಪಿದೆ. ಟೀಂ ಇಂಡಿಯಾ 2-0 ಅಂಕಗಳಿಂದ ಹಿನ್ನಡೆಯಲ್ಲಿದೆ.





