ಕ್ರಿಕೆಟ್ ಲೋಕದಲ್ಲಿ ಈಗಾಗಲೇ ತಮ್ಮ ಪ್ರತಿಭೆಯಿಂದ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ ಅವರ ಕುಟುಂಬದಿಂದ ಮತ್ತೊಬ್ಬ ಪ್ರತಿಭಾವಂತ ಆಟಗಾರ ಹೊರಹೊಮ್ಮಿದ್ದಾನೆ. ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಮುನ್ನವೇ ವೈಭವ್ ಅವರ ಕಿರಿಯ ಸಹೋದರ ಆಶೀರ್ವಾದ್ ಸೂರ್ಯವಂಶಿ ಭರ್ಜರಿ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ.
ಬಿಹಾರದ ಸಮಷ್ಠಿಪುರದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಕಣಕ್ಕಿಳಿದ 10 ವರ್ಷದ ಆಶೀರ್ವಾದ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 87 ಎಸೆತಗಳಲ್ಲಿ 103 ರನ್‌ಗಳನ್ನು ಬಾರಿಸಿದ ಅವರು 20 ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ಬ್ಯಾಟಿಂಗ್ ಕೌಶಲ್ಯ ಪ್ರದರ್ಶಿಸಿರುವ ಆಶೀರ್ವಾದ್ ಅವರ ಇನ್ನಿಂಗ್ಸ್ ಸಾಮಾಜಿಕ ಜಾಲತಾಣಗಳಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ. ತಮ್ಮನ ಈ ಸಾಧನೆಗೆ ಅಣ್ಣ ವೈಭವ್ ಸೂರ್ಯವಂಶಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿರುವ ಆಶೀರ್ವಾದ್ ಸೂರ್ಯವಂಶಿ, ಭವಿಷ್ಯದಲ್ಲಿ ಭಾರತದ ಕ್ರಿಕೆಟ್‌ಗೆ ಮತ್ತೊಂದು ಭರವಸೆಯ ಆಟಗಾರನಾಗಿ ಬೆಳೆಯುವ ನಿರೀಕ್ಷೆ ಮೂಡಿಸಿದ್ದಾರೆ.





