ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ನಡುವಿನ ಸಂಬಂಧದ ಬಗ್ಗೆ ಮತ್ತೊಮ್ಮೆ ಊಹಾಪೋಹಗಳು ಆರಂಭವಾಗಿವೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಗಂಭೀರ್ ಅವರು ರೋಹಿತ್ ಶರ್ಮಾ, ನಾಯಕ ಶುಭಮನ್ ಗಿಲ್ ಹಾಗೂ ಇತರ ಆಟಗಾರರೊಂದಿಗೆ ಮಾತುಕತೆ ನಡೆಸಿದರು. ಆದರೆ ವಿರಾಟ್ ಕೊಹ್ಲಿಯೊಂದಿಗೆ ಯಾವುದೇ ಮಾತುಕತೆ ನಡೆಸಿರುವುದು ಕಂಡುಬರಲಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಈ ಬೆಳವಣಿಗೆ ಸಾಮಾಜಿಕ ಜಾಲತಾಣಗಳಲ್ಲಿ “ವಿರಾಟ್-ಗಂಭೀರ್ ನಡುವೆ ಮತ್ತೆ ಶೀತಲ ಸಮರವೇ?” ಎಂಬ ಚರ್ಚೆಗೆ ಕಾರಣವಾಗಿದೆ. ಆದರೆ ಈ ಕುರಿತು ಇಬ್ಬರೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.





